ಬೆಂಗಳೂರು: ರಾಜ್ಯ ಸರ್ಕಾರವು ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟವನ್ನು ನೀಡುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತಿದೆ.
ಪ್ರಸ್ತುತ 1ರಿಂದ 10ನೇ ತರಗತಿವರೆಗೆ ಮಾತ್ರ ಬಿಸಿಯೂಟ ಸೌಲಭ್ಯ ಲಭ್ಯವಿದ್ದು, ಅದನ್ನು ಸರ್ಕಾರಿ ಮತ್ತು ಅನುದಾನ ಪಿಯು ಕಾಲೇಜುಗಳಿಗೆ ವಿಸ್ತರಿಸುವ ಸಾಧ್ಯತೆಯಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೂಡ ಈ ಯೋಜನೆಯಿಂದ ಪ್ರಯೋಜನ ಪಡೆಯುವಂತೆ ತಯಾರಿ ನಡೆಯುತ್ತಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ಮಾಹಿತಿ ನೀಡಿವೆ.
ನವೆಂಬರ್ 14ರಂದು ನಡೆಯುವ ಮಕ್ಕಳ ದಿನಾಚರಣೆ ವೇಳೆ ಸಿಎಂ ಸಿದ್ದರಾಮಯ್ಯ ಈ ಸಂಬಂಧ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಇದರಿಂದ ರಾಜ್ಯದ ಹೆಚ್ಚಿನ ವಿದ್ಯಾರ್ಥಿಗಳು ಆರೋಗ್ಯಕರ ಮತ್ತು ಪೋಷಕಯುತ ಊಟವನ್ನು ಶಾಲಾ–ಕಾಲೇಜುಗಳಲ್ಲಿ ಪಡೆಯುವ ನಿರೀಕ್ಷೆ ಹೆಚ್ಚಿದೆ.



