ಮಂಡ್ಯ: ಚಲಿಸುತ್ತಿದ್ದ ವೇಳೆ ಏಕಾಏಕಿ ಬೆಂಕಿ ಹೊತ್ತಿದ ಪರಿಣಾಮ ಪಲ್ಸರ್ ಬೈಕ್ ಹೊತ್ತಿ ಉರಿದಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ತಾಲೂಕು ಕ್ರೀಡಾಂಗಣದ ಬಳಿ ಜರುಗಿದೆ.
ಹಾಡ್ಲಿ ಸರ್ಕಲ್‌ನ ಸುದೀಪ್ ಎಂಬುವವರಿಗೆ ಸೇರಿದ ಪಲ್ಸರ್ ಬೈಕ್ ಚಾಲನೆಯಲ್ಲಿದ್ದಾಗಲೇ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಳ್ಳಲು ಆರಂಭಿಸಿದೆ. ಕೂಡಲೇ ಎಚ್ಚೆತ್ತ ಯುವಕ–ಯುವತಿ ತಕ್ಷಣ ಬೈಕ್‌ನಿಂದ ಇಳಿದಿದ್ದಾರೆ. ಕೂಡಲೇ ಬೈಕ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಹಿನ್ನೆಲೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಈ ಘಟನೆ ಮಳವಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.



