ಉಡುಪಿ: ಧರ್ಮಸ್ಥಳಕ್ಕೆ ಕಪ್ಪು ಮಸಿ ಬಳಿದವರಿಗೆ ಶಿಕ್ಷೆಯಾಗುವುದು ಗ್ಯಾರಂಟಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳಿನ ಮಹಲ್ ಕಟ್ಟಿದರು. ಆಗ ಆರೋಪ ಮಾಡಿದ್ದು ಇದೇ ಬಿಜೆಪಿ,
Advertisement
ಈಗ ಗೋಸುಂಬೆ ಕಣ್ಣೀರು ಹಾಕುತ್ತಿರುವುದು ಇದೇ ಬಿಜೆಪಿ. ರಾಜ್ಯ, ದೇಶ ವಿದೇಶದಲ್ಲೂ ಈ ವಿಚಾರ ಚರ್ಚೆಯಾಯಿತು. ಧರ್ಮಸ್ಥಳಕ್ಕೆ ಕಪ್ಪು ಮಸಿ ಬಳಿದವರಿಗೆ ಶಿಕ್ಷೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇನ್ನೂ ಧರ್ಮಸ್ಥಳ ಬಹಳ ಪವಿತ್ರವಾದದ್ದು, ಅಲ್ಲಿಗೆ ಮಸಿ ಬಳಿಯುವ ಯತ್ನ ನಡೆಯುತ್ತಿದೆ. ಗುಂಡಿ ಮೇಲೆ ಗುಂಡಿ ತೋಡಿದರೂ, ಬೆಟ್ಟ ಅಗೆದರು ಇಲಿಯೂ ಸಿಗಲಿಲ್ಲ. ಸರ್ಕಾರ ಧರ್ಮಸ್ಥಳದ ಜೊತೆಗೆ ಯಾವತ್ತೂ ಇರುತ್ತದೆ ಎಂದಿದ್ದಾರೆ.