HomeAgricultureಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಸರ್ಕಾರದ ಆದೇಶಾನುಸಾರ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಭತ್ತ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸಲಹೆ ನೀಡಿದರು.

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಉತ್ಪನವನ್ನು ಖರೀದಿಸುವ ಕುರಿತು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಗಳನ್ವಯ ಭತ್ತ ಉತ್ಪನ್ನ ಖರೀದಿ ನೋಂದಣಿ 15-11-2024ರಿಂದ 31-12-2024ರ ಅವಧಿಯನ್ನು ನಿಗದಿಪಡಿಸಲಾಗಿದೆ. ಜಿಲ್ಲೆಯಲ್ಲಿ ತೆರೆಯಲಾಗುವ ಭತ್ತ ಉತ್ಪನ್ನ ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುವ ಎಫ್‌ಎಕ್ಯೂ ಗುಣಮಟ್ಟ ಪರಿಶೀಲನೆಗೆ ಗ್ರೇಡರ್‌ಗಳನ್ನು ನೇಮಕ ಮಾಡಬೇಕು ಮತ್ತು ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕುರಿತು ರೈತರಿಗೆ ತಿಳುವಳಿಕೆ ನೀಡಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.

ಜಿಲ್ಲೆಯಲ್ಲಿ ಭತ್ತದ ಹಲ್ಲಿಂಗ್ ಕಾರ್ಯವನ್ನು ಕೈಗೊಳ್ಳಲು ಅಕ್ಕಿ ಗಿರಣಿಗಳು ನೊಂದಾಯಿಸಿಕೊಳ್ಳದಿದ್ದಲ್ಲಿ ಜಿಲ್ಲೆಯಲ್ಲಿ ಸಂಗ್ರಹಿಸಿದ ಭತ್ತವನ್ನು ಪಕ್ಕದ ಜಿಲ್ಲೆಯಲ್ಲಿ ನೋಂದಾಯಿತ ಅಕ್ಕಿ ಗಿರಣಿಗಳಿಗೆ ಸಾಗಾಣಿಕೆ ಮಾಡಿ ಭತ್ತದ ಹಲ್ಲಿಂಗ್ ಹಾಗೂ ಸಾರವರ್ಧನೆ ಕಾರ್ಯವನ್ನು ಕೈಗೊಳ್ಳಬೇಕು. ಭತ್ತ ಸರಬರಾಜು ಮಾಡಿದ ರೈತರಿಗೆ 15 ದಿನದೊಳಗೆ ಅವರ ಬ್ಯಾಂಕ್ ಖಾತೆಗೆ ಹಣವನ್ನು ನೇರ ನಗದು ವರ್ಗಾವಣೆ ಮುಖಾಂತರ ಪಾವತಿಸಬೇಕು. ಈ ಬಗ್ಗೆ ಜಂಟಿ ಕೃಷಿ ನಿರ್ದೇಶಕರು ಹಾಗೂ ರಾಜ್ಯ ಸಹಕಾರ ಮಾರಾಟ ಮಂಡಳದ ಜಿಲ್ಲಾ ಶಾಖಾ ವ್ಯವಸ್ಥಾಪಕರು ಕ್ರಮ ವಹಿಸುವಂತೆ ತಿಳಿಸಿದರು.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಯನ್ವಯ ಮುಂಡರಗಿ ಎಪಿಎಂಸಿ ಪ್ರಾಂಗಣದಲ್ಲಿ ಭತ್ತ ಉತ್ಪನವನ್ನು ಖರೀದಿಸಲು ಖರೀದಿ ಕೇಂದ್ರವನ್ನು ತೆರೆಯಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಹಕಾರಿ ಸಂಘಗಳ ಉಪನಿಬಂಧಕರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ ಮಾತನಾಡಿ, ಎಫ್.ಎ.ಕ್ಯೂ ಗುಣಮಟ್ಟದ ಭತ್ತ ಹುಟ್ಟುವಳಿಗೆ ಪ್ರತಿ ಕ್ವಿಂಟಾಲ್‌ಗೆ ಭತ್ತ ಸಾಮಾನ್ಯ- 2300 ರೂ, ಭತ್ತ ಗ್ರೇಡ್ ಎ-2320 ರೂ ಗಳಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಗಳನ್ವಯ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕಫೆಡ್) ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ ಆದೇಶಿಸಲಾಗಿದೆ ಎಂದು ಸಭೆಗೆ ತಿಳಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!