HomeBengaluru Newsಇ-ಸ್ವತ್ತು ನೀಡಿಕೆಯಲ್ಲಿ ವಿಳಂಬಕ್ಕೆ ಬ್ರೇಕ್: ಅಕ್ಟೋಬರ್ 2ರಿಂದ ಹೊಸ ಪ್ರಕ್ರಿಯೆ ಆರಂಭ!

ಇ-ಸ್ವತ್ತು ನೀಡಿಕೆಯಲ್ಲಿ ವಿಳಂಬಕ್ಕೆ ಬ್ರೇಕ್: ಅಕ್ಟೋಬರ್ 2ರಿಂದ ಹೊಸ ಪ್ರಕ್ರಿಯೆ ಆರಂಭ!

For Dai;y Updates Join Our whatsapp Group

ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ ಇ-ಸ್ವತ್ತು ನೀಡಿಕೆಯಲ್ಲಿ ಆಗುತ್ತಿರುವ ವಿಳಂಬವನ್ನು ತಪ್ಪಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಕ್ರಮ ಕೈಗೊಂಡಿದ್ದಾರೆ.

ಪ್ರಥಮ ಹಂತದಲ್ಲಿ ಗ್ರಾಮಠಾಣಾ ವ್ಯಾಪ್ತಿಯ ಆಸ್ತಿಗಳಿಗೆ ಅಕ್ಟೋಬರ್ 2ರಿಂದ ಇ-ಸ್ವತ್ತು ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇ-ಸ್ವತ್ತು ನೀಡಿಕೆಯಲ್ಲಿ ಎದುರಾಗುತ್ತಿರುವ ತಾಂತ್ರಿಕ ಹಾಗೂ ಪ್ರಕ್ರಿಯಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಸರಳೀಕೃತ ‘ಇ-ಸ್ವತ್ತು-03’ ತಂತ್ರಾಂಶ ಸಿದ್ಧಪಡಿಸುವಂತೆ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿದ್ದಾರೆ.

ನ್ಯಾಯಾಲಯದಲ್ಲಿ ವ್ಯಾಜ್ಯ ಇರುವ ಆಸ್ತಿಗಳು, ಸರ್ಕಾರಿ ಜಾಗ, ಕೆರೆ ಅಂಗಳ, ಬಿ ಖರಾಬು ಹಾಗೂ ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಿರುವ ಮನೆಗಳನ್ನು ಹೊರತುಪಡಿಸಿ, ನಿಯಮಾನುಸಾರ ಅರ್ಹ ವಾರಸುದಾರರಿಗೆ ಇ-ಸ್ವತ್ತು ನೀಡಲಾಗುತ್ತದೆ.

ಅಕ್ಟೋಬರ್ 2ರಿಂದ ಅರ್ಜಿಗಳನ್ನು ಸ್ವೀಕರಿಸಿ, ನವೆಂಬರ್‌ನಲ್ಲಿ ಕನಿಷ್ಠ 10 ಲಕ್ಷ ಆಸ್ತಿಗಳಿಗೆ ಮನೆ ಬಾಗಿಲಿಗೆ ಇ-ಸ್ವತ್ತು ತಲುಪಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ದಾಖಲೆಗಳಿಲ್ಲದ ಗ್ರಾಮಠಾಣಾ ಆಸ್ತಿಗಳ ಪೈಕಿ ಹಿತ್ತಲು ಮತ್ತು ಮನೆ ಅಂಗಳ ಸೇರಿದಂತೆ 4,000 ಚದರ ಅಡಿಯೊಳಗಿನ ಆಸ್ತಿಗಳಿಗೆ ಮಾತ್ರ ಇ-ಸ್ವತ್ತು ನೀಡಲು ಅವಕಾಶ ಕಲ್ಪಿಸಲಾಗಿದೆ.

ಈ ಸಂಬಂಧ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ಪ್ರತ್ಯೇಕ ಗ್ರಾಮಸಭೆ ನಡೆಸಲಾಗುತ್ತದೆ. ಅರ್ಜಿದಾರರು ಅದೇ ಆಸ್ತಿಯಲ್ಲಿ ವಾಸಿಸುತ್ತಿದ್ದಾರೆಯೇ ಹಾಗೂ ಅವರೇ ಆಸ್ತಿಯ ನೈಜ ಮಾಲೀಕರೇ ಎಂಬುದನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಪರಿಶೀಲಿಸಲಾಗುತ್ತದೆ.

ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಸಲು 21 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಈ ಕುರಿತು ಪಂಚಾಯಿತಿ ಕಚೇರಿಗಳಲ್ಲಿ ನೋಟಿಸ್ ಪ್ರಕಟಿಸಲಾಗುತ್ತದೆ. ನಿಗದಿತ ಅವಧಿಯಲ್ಲಿ ಯಾವುದೇ ಆಕ್ಷೇಪಣೆ ಬಾರದಿದ್ದರೆ ನಿಯಮಾನುಸಾರ ಇ-ಸ್ವತ್ತು ನೀಡಲು ಕ್ರಮ ಕೈಗೊಳ್ಳಲಾಗುತ್ತದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img