HomeKarnataka Newsಪುತ್ತೂರು BJP ಮುಖಂಡನ ಪುತ್ರನ ಪ್ರಕರಣ: ಸಂತ್ರಸ್ತೆಗೆ ₹75 ಸಾವಿರ ಮಾಸಿಕ ಪರಿಹಾರಕ್ಕೆ ಹೈಕೋರ್ಟ್ ಆದೇಶ

ಪುತ್ತೂರು BJP ಮುಖಂಡನ ಪುತ್ರನ ಪ್ರಕರಣ: ಸಂತ್ರಸ್ತೆಗೆ ₹75 ಸಾವಿರ ಮಾಸಿಕ ಪರಿಹಾರಕ್ಕೆ ಹೈಕೋರ್ಟ್ ಆದೇಶ

For Dai;y Updates Join Our whatsapp Group

Spread the love

ಬೆಂಗಳೂರು: 21 ವರ್ಷದ ವಿದ್ಯಾರ್ಥಿನಿಗೆ ಮದುವೆಯ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ, ಆಕೆಯನ್ನು ತಾಯಿಯಾಗುವಂತೆ ಮಾಡಿರುವ ಗಂಭೀರ ಆರೋಪ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿಗೆ ತೀವ್ರ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ.ರಾವ್ ವಿರುದ್ಧ ನ್ಯಾಯಾಲಯ ಕಠಿಣ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಂತ್ರಸ್ತೆ ಮತ್ತು ಆಕೆಯ ಮಗುವಿನ ಪೋಷಣೆಗೆ ಪ್ರತಿಮಾಸ ₹75,000 ಪಾವತಿಸಬೇಕು ಎಂದು ನ್ಯಾಯಪೀಠ ಕಟ್ಟುನಿಟ್ಟಾಗಿ ನಿರ್ದೇಶನ ನೀಡಿದೆ. ಜೊತೆಗೆ, ಪ್ರಕರಣದ ಮುಂದಿನ ವಿಚಾರಣೆಗೆ ಮಧ್ಯಂತರ ತಡೆ ನೀಡಲಾಗಿದ್ದು, ಸಂತ್ರಸ್ತೆ ಹಾಗೂ ಆಕೆಯ ಕುಟುಂಬಸ್ಥರು ಈ ವಿಚಾರದಲ್ಲಿ ಮಾಧ್ಯಮಗಳ ಮುಂದೆ ಹೋಗಬಾರದೆಂದು ನಿರ್ಬಂಧ ವಿಧಿಸಲಾಗಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಕೃಷ್ಣ ಜೆ.ರಾವ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ. ಆರೋಪಿ ಸ್ವತಃ ಅಥವಾ ತನ್ನ ಪೋಷಕರ ಮೂಲಕ ಸಂತ್ರಸ್ತೆ ಮತ್ತು ಮಗುವಿನ ಅಗತ್ಯಗಳನ್ನು ಪೂರೈಸಲು ಮುಂದಿನ ಒಂದು ವಾರದೊಳಗೆ ಹಣ ಪಾವತಿಸಬೇಕು ಹಾಗೂ ನಂತರ ಪ್ರತಿಮಾಸವೂ ಇದೇ ಮೊತ್ತವನ್ನು ನೀಡಬೇಕು ಎಂದು ಸೂಚಿಸಲಾಗಿದೆ.

ಇದಕ್ಕೂ ಮುನ್ನ ನಡೆದ ವಿಚಾರಣೆಯಲ್ಲಿ ಸಂತ್ರಸ್ತೆಯ ಪರ ವಕೀಲರು, ಇಬ್ಬರೂ ವಿದ್ಯಾರ್ಥಿಗಳಾಗಿದ್ದಾಗ ಪ್ರೀತಿಸುತ್ತಿದ್ದು, ಮದುವೆಯ ಭರವಸೆ ನೀಡಿ ಹಲವು ಬಾರಿ ದೈಹಿಕ ಸಂಬಂಧ ಬೆಳೆಸಲಾಗಿದೆ ಎಂದು ವಾದಿಸಿದರು. ಇದರ ಪರಿಣಾಮವಾಗಿ ಸಂತ್ರಸ್ತೆ ಮಗುವಿಗೆ ಜನ್ಮ ನೀಡಿದ್ದು, ಮಗುವಿಗೆ ಶೀಘ್ರದಲ್ಲೇ ಒಂದು ವರ್ಷ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಆದರೆ, ಆರೋಪಿ ಅಥವಾ ಅವರ ಕುಟುಂಬದಿಂದ ಯಾವುದೇ ಸಹಾಯ ದೊರೆತಿಲ್ಲ ಎಂದು ವಾದಿಸಲಾಯಿತು.

ಸಂತ್ರಸ್ತೆಯ ಕುಟುಂಬ ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ತಾಯಿ ಮನೆ ಕೆಲಸ ಮಾಡುತ್ತಿದ್ದು, ತಂದೆ ದಿನಗೂಲಿ ಕಾರ್ಮಿಕರಾಗಿದ್ದಾರೆ ಎಂಬುದೂ ನ್ಯಾಯಾಲಯದ ಗಮನಕ್ಕೆ ತರಲಾಗಿದೆ. ಇನ್ನೊಂದೆಡೆ, ಸರ್ಕಾರದ ಪರ ವಕೀಲರು, ಆರೋಪಿ ಕುಟುಂಬವು ₹50 ಲಕ್ಷ ನೀಡುವ ಹಾಗೂ ಮದುವೆಯ ಬಳಿಕ ವಿಚ್ಛೇದನ ನೀಡುವ ಷರತ್ತು ಮುಂದಿಟ್ಟಿದೆ ಎಂದು ತಿಳಿಸಿದರು. ಆದರೆ, ಈ ಆರೋಪಗಳನ್ನು ಅರ್ಜಿದಾರರ ಪರ ವಕೀಲರು ತಳ್ಳಿಹಾಕಿದ್ದಾರೆ.

ಈ ನಡುವೆ, ಪ್ರಕರಣದ ಬಗ್ಗೆ ಮಾಧ್ಯಮ ವರದಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ನಿಯಂತ್ರಿಸುವಂತೆ ಮನವಿ ಮಾಡಲಾಗಿದ್ದು, ಪೀಠ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಜೂನ್ 5ಕ್ಕೆ ಮುಂದೂಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!