ಶಿವಮೊಗ್ಗ : 7 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಮೂಡಿದ ಘಟನೆ ಶಿವಮೊಗ್ಗ ತಾಲೂಕಿನ ಮತ್ತೂರು ಸಮೀಪದ ಬೂತನಗುಡಿ ಗ್ರಾಮದ ಮನೆಯ ಹಿಂಭಾಗದಲ್ಲಿ ಜರುಗಿದೆ.
ಉರಗ ತಜ್ಞ ಕಿರಣ್ ರಾತ್ರಿಯೇ ಹೆಬ್ಬಾವು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಗ್ರಾಮದ ವಿನಯ್ ಕುಮಾರ್ ಎಂಬುವವರ ಮನೆಯ ಹಿಂಭಾಗದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿತ್ತು. ತಕ್ಷಣ ಮನೆಯವರು ಸ್ನೇಕ್ ಕಿರಣ್ ಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಉರಗ ತಜ್ಞ ಕಿರಣ್ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ. ನಂತರ ಸೆರೆ ಹಿಡಿದ ಹೆಬ್ಬಾವು ವನ್ನು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಹೆಬ್ಬಾವು ಸೆರೆಯಿಂದ ಗ್ರಾಮಸ್ಥರು ಹಾಗೂ ಮನೆ ಮಾಲೀಕರು ನಿಟ್ಟುಸಿರು ಬಿಟ್ಟಿದ್ದಾರೆ.



