ವಿಜಯಸಾಕ್ಷಿ ಸುದ್ದಿ, ಡಂಬಳ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳನ್ನೂ ಮೀರಿಸುವಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಜೊತೆಗೆ ಮೂಲಸೌಕರ್ಯಗಳು ಇನ್ನಷ್ಟು ಅಭಿವೃದ್ಧಿಗೊಳ್ಳಲಿವೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಡಂಬಳ ಹೋಬಳಿಯ ಹಳ್ಳಿಗುಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಕೊಠಡಿ ಮತ್ತು ಡಿಜಿಟಲ್ ಕ್ಲಾಸ್ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸರ್ಕಾರಿ ಶಾಲೆಗಳಿಗೆ ಬರುವ ಮಕ್ಕಳಿಗೆ ಕಲಿಕೆ ಉತ್ತಮವಾಗಿರಲು, ಡಿಜಿಟಲ್ ಶಿಕ್ಷಣಕ್ಕೆ ಪೂರಕವಾದ ಪರಿಕರಗಳನ್ನು ಒದಗಿಸಲಾಗುತ್ತಿದೆ. ಸರ್ಕಾರಿ ಶಾಲೆಯ ಮಕ್ಕಳಲ್ಲೂ ದೊಡ್ಡ ದೊಡ್ಡ ಕನಸುಗಳು ಇರುತ್ತವೆ. ಅವೆಲ್ಲವುಗಳನ್ನು ನನಸು ಮಾಡಿಕೊಳ್ಳುವಂತಹ ರಚನಾತ್ಮಕ ವಾತಾವರಣದ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಆದ್ಯತೆ ನೀಡುತ್ತಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ ಅಧ್ಯಕ್ಷ ಮಂಜುನಾಥ ಚನ್ನಳ್ಳಿ, ಬಸವರಾಜ ಪುರದ, ವೇ.ಮೂ. ಶಂಕ್ರಯ್ಯ ಹಿರೇಮಠ, ಅನ್ನಪೂರ್ಣ ಜಿ.ಪಾಟೀಲ, ಮುಂಡರಗಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಡಿ.ಡಿ. ಮೋರನಾಳ, ಜಿ.ಎಸ್. ಕೊರ್ಲಹಳ್ಳಿ, ಉಮೇಶ ಚನ್ನಳ್ಳಿ, ಗುರಣ್ಣ ಕುರ್ತಕೋಟಿ, ಪಿಡಬ್ಲುಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್.ಬಸವರಾಜ, ಸಹಾಯಕ ಇಂಜಿನಿಯರ್ ನಾಗೇಂದ್ರ ಪಟ್ಟಣಶೆಟ್ಟಿ, ಬಿಇಒ ಜಿ.ಎಸ್. ಅಣ್ಣಿಗೇರಿ, ಮುಖ್ಯೋಪಾಧ್ಯಾಯ ರಾಘವೇಂದ್ರ ಕಲಗುಡಿ, ಗುತ್ತಿಗೆದಾರರಾದ ಕಾರ್ತಿಕ ಪಾಟೀಲ್, ಮಂಜುನಾಥ ತಿಮ್ಮಾಪುರ, ಎಸ್.ಡಿ. ಮುದಗಲ್ಲ, ಎಸ್.ಆರ್. ನೀಲರಡ್ಡಿ, ರೇಖಾ ಬಾವಿಕಟ್ಟಿ, ಎಚ್.ಹಲವಾಗಲಿ, ಸರೋಜಾ, ಎಸ್‌ಡಿಎಮ್‌ಸಿ ಉಪಾಧ್ಯಕ್ಷರು, ಸದಸ್ಯರು, ಗ್ರಾಮದ ಹಿರಿಯರು, ಗ್ರಾ.ಪಂ ಸದಸ್ಯರು, ಶಿಕ್ಷಣ ಪ್ರೇಮಿಗಳು, ವಿದ್ಯಾರ್ಥಿಗಳು ಇದ್ದರು.
ಸಿ.ಆರ್.ಪಿ ಜಿ.ಕೆ. ವಸ್ತ್ರದ, ಮುಖ್ಯೋಪಾಧ್ಯಾಯ ಆರ್.ಎಸ್. ಕಲಗುಡಿ ಮಾತನಾಡಿ, ಇಂದಿನ ಆಧುನಿಕ ಕಾಲದಲ್ಲಿ ತಂತ್ರಜ್ಞಾನದ ಬಳಕೆ ಅತ್ಯಂತ ಪ್ರಮುಖವಾಗಿದೆ. ತಂತ್ರಜ್ಞಾನದ ಬಳಕೆಯಿಂದ ಕಲಿಕೆ ಮತ್ತು ಬೋಧನೆ ಪರಿಣಾಮಕಾರಿಯಾಗಿರುತ್ತದೆ. ಆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಜ್ಞಾನದ ವಿಕಾಸ ಹೆಚ್ಚಿಸಲು ಶಿಕ್ಷಣಕ್ಕೆ ಸರ್ಕಾರ ಆದ್ಯತೆ ನೀಡುತ್ತಿರುವುದು ಪ್ರಶಂಸನೀಯ ಎಂದು ಹೇಳಿದರು.