ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ನಾಡಿನೆಲ್ಲೆಡೆ ಆಯುಧ ಪೂಜೆಯ ಸಂಭ್ರಮ ಮನೆ ಮಾಡಿದೆ. ಇಂದು ಮೈಸೂರು ಅರಮನೆಯಲ್ಲಿ ಶರನ್ನವರಾತ್ರಿ ಅಂಗವಾಗಿ ಸಾಂಪ್ರದಾಯಿಕ ಆಯುಧ ಪೂಜೆ ನಡೆಯುತ್ತಿದೆ ಇದರ ಬೆನ್ನಲ್ಲೇ ರಾಜಮನೆತನಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.
Advertisement
ರಾಣಿ ತ್ರಿಷಿಕಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಯುಧ ಪೂಜೆ ದಿನ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಎರಡನೇ ಮಗುವಿಗೆ ತಂದೆಯಾಗಿದ್ದಾರೆ. ರಾಣಿ ತ್ರಿಷಿಕಾ ಕುಮಾರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯದಿಂದಿದ್ದಾರೆ.