KPSC ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಎಡವಟ್ಟು: ಮರು ಪರೀಕ್ಷೆ ನಡೆಸಲು ಸಿಎಂ ಸೂಚನೆ

0
Spread the love

ಬೆಂಗಳೂರು: ಆಗಸ್ಟ್​ 27 ರಂದು ನಡೆದ ಕೆಪಿಎಸ್​ಸಿ ಗೆಜೆಟೆಡ್​ ಪ್ರೊಬೇಷನರ್ಸ್​​​ ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿನ ಕನ್ನಡ ದೋಷದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮರು ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸೂಚನೆ ನೀಡಿದ್ದಾರೆ. ಹೌದು ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವೀಟ್​ ಮಾಡಿದ ಸಿಎಂ ಸಿದ್ದರಾಮಯ್ಯ,

Advertisement

“ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ.” ಎಂದು ತಿಳಿಸಿದ್ದಾರೆ.

“ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ” ಎಂದರು.

 

 


Spread the love

LEAVE A REPLY

Please enter your comment!
Please enter your name here