HomeIndia Newsರಾಜ್ಯದಲ್ಲಿ ಹಲವು ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ, ರಾಹುಲ್ ಯಾಕೆ ಮೌನ? ಕಾಂಗ್ರೆಸ್ ವಿರುದ್ಧ ಗೋವಿಂದ ಕಾರಜೋಳ...

ರಾಜ್ಯದಲ್ಲಿ ಹಲವು ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ, ರಾಹುಲ್ ಯಾಕೆ ಮೌನ? ಕಾಂಗ್ರೆಸ್ ವಿರುದ್ಧ ಗೋವಿಂದ ಕಾರಜೋಳ ವಾಗ್ದಾಳಿ

For Dai;y Updates Join Our whatsapp Group

ನವದೆಹಲಿ: ಕರ್ನಾಟಕದಲ್ಲಿ ಹಲವು ಬಾರಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿದ್ದರೂ, ಈ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಏಕೆ ಮಾತನಾಡುತ್ತಿಲ್ಲ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ‘ಮೂರ್ಖ ಮತ್ತು ಅಂಧಭಕ್ತ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

“ಲೋಕಸಭೆ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದರ ಘನತೆ ಹಾಗೂ ಗೌರವವನ್ನು ಕಾಪಾಡುವುದು ಎಲ್ಲರ ಕರ್ತವ್ಯ. ಆದರೆ ಕಳೆದ ಒಂದು ವಾರದಿಂದ ವಿಪಕ್ಷಗಳು ಸದನದಲ್ಲಿ ಗದ್ದಲ ಮಾಡುತ್ತಿವೆ. ರಾಹುಲ್ ಗಾಂಧಿ ಜೋಕರ್ ರೀತಿಯಲ್ಲಿ ವರ್ತಿಸುತ್ತಿದ್ದಾರೆ” ಎಂದು ಕಾರಜೋಳ ಟೀಕಿಸಿದರು.

ಕರ್ನಾಟಕದಲ್ಲಿ ಈ ಹಿಂದೆ ಹಲವು ಬಾರಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ ಎಂದು ಉಲ್ಲೇಖಿಸಿದ ಅವರು, “2012ರಲ್ಲಿ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. 2014ರಲ್ಲಿ ಸಿಐಡಿ ವರದಿ ಬಂದಿತ್ತು. 2016ರಲ್ಲೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ನಡೆದಿತ್ತು. ಆದರೆ ಈ ಬಗ್ಗೆ ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ನಾಯಕರು ಏಕೆ ಮಾತನಾಡಲಿಲ್ಲ?” ಎಂದು ಪ್ರಶ್ನಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಕಾಂಗ್ರೆಸ್ ಸರ್ಕಾರ ಸರಿಯಾಗಿ ಕಾನೂನು ಹೋರಾಟ ನಡೆಸಲಿಲ್ಲ. ಇದರಿಂದ ಆರೋಪಿಗಳು ತಪ್ಪಿಸಿಕೊಳ್ಳಲು ಅವಕಾಶವಾಯಿತು ಎಂದು ಆರೋಪಿಸಿದ ಅವರು, 2018-19ರಲ್ಲಿ ಅಂದಿನ ಸಚಿವ ಜಿ. ಪರಮೇಶ್ವರ್ ಅವರ ಆಪ್ತ ಕಾರ್ಯದರ್ಶಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆಯೂ ರಾಹುಲ್ ಗಾಂಧಿ ಮಾತನಾಡಬೇಕಿತ್ತು ಎಂದರು.

ನೀಟ್ ಪರೀಕ್ಷೆಯಿಂದ ವೈದ್ಯಕೀಯ ಸೀಟುಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಬಿದ್ದಿದೆ ಎಂದು ಹೇಳಿದ ಕಾರಜೋಳ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಟ್ ಪರೀಕ್ಷೆ ಜಾರಿಗೆ ತಂದ ಬಳಿಕ ದಲಿತರು ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಸಿಕ್ಕಿದೆ ಎಂದು ಹೇಳಿದರು.

“ಇದನ್ನು ಶ್ಲಾಘಿಸುವ ಬದಲು ಕಾಂಗ್ರೆಸ್ ವಿರೋಧ ಮಾಡುತ್ತಿದೆ. ಸರ್ಕಾರ ತಪ್ಪು ಮಾಡಿದ್ದರೆ ಲೋಕಸಭೆಯ ವಿಪಕ್ಷ ನಾಯಕರಾಗಿ ಸದನದಲ್ಲಿ ವಿಚಾರ ಪ್ರಸ್ತಾಪಿಸಬೇಕು. ಅದರ ಬದಲು ಅಸಾಂವಿಧಾನಿಕವಾಗಿ ಮಾತನಾಡುವುದು ಸರಿಯಲ್ಲ” ಎಂದು ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img