ಬೆಂಗಳೂರು: ಸದ್ಯ ಪ್ರಭಾವಿ ಸಚಿವರು, ಅವರ ಪುತ್ರನ ವಿರುದ್ಧ ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ವಿಚಾರಕ್ಕೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಜುಗರ ತಂದೊಡ್ಡಿದೆ. ಇದರ ನಡುವೆಯೇ ರಾಜ್ಯ ಸರ್ಕಾರದ ವಿರುದ್ಧ ಫೋನ್ ಟ್ಯಾಪಿಂಗ್ ಬಾಂಬ್ ಸಿಡಿದಿದೆ. ಇನ್ನೂ ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ.
Advertisement
ನಗರದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಆರ್ ಅಶೋಕ ತಮ್ಮ ಫೋನ್ ಟ್ಯಾಪ್ ಅಗುತ್ತಿರುವ ಬಗ್ಗೆ ದೂರಿರುವುದನ್ನು ಕೇಳಿಸಿಕೊಂಡಿದ್ದೇನೆ, ಆದರೆ ಅವರಾಗಲೀ ಅವರು ಪಕ್ಷದ ಸದಸ್ಯರಾಗಲೀ ದೂರು ಸಲ್ಲಿಸಿಲ್ಲ ಎಂದು ಹೇಳಿದರು.
ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಯಾವುದೇ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಾಗಿರುವುದು ತನ್ನ ಗಮನಕ್ಕೆ ಬಂದಿಲ್ಲ, ಅಶೋಕ್ ಅವರು ನಿರ್ದಿಷ್ಟವಾಗಿ ದೂರು ಸಲ್ಲಿಸಿದರೆ ತನಿಖೆ ಮಾಡಿಸಬಹುದು ಎಂದು ಪರಮೇಶ್ವರ್ ಹೇಳಿದರು.