ಬೆಂಗಳೂರು:- ಕಾಂಗ್ರೆಸ್‌ನಲ್ಲಿ ಅಕ್ಟೋಬರ್ ಕ್ರಾಂತಿಯಾಗುವ ಲಕ್ಷಣಗಳಿವೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನೊಳಗೆ ಕ್ರಾಂತಿ ಆಗುವ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಅಕ್ಟೋಬರ್ ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿವೆ. ಕ್ರಾಂತಿಯ ನಂತರ ಸಿಎಂ ಬದಲಾವಣೆಯಾಗುವ ಲಕ್ಷಣವಿದೆ. ಸರ್ಕಾರ ಅಸ್ಥಿರಗೊಂಡು ಬಿದ್ದುಹೋದರೆ ಚುನಾವಣೆ ಮಾಡುವುದು ಸೂಕ್ತ. ನಾವು ಕಾಂಗ್ರೆಸ್‌ನಂತೆ ಸರ್ಕಾರ ಬೀಳಿಸಲು ಹೋಗಲ್ಲ. ಎರಡೂವರೆ ವರ್ಷಗಳಲ್ಲಿ ಸರ್ಕಾರ ಟೇಕಾಫ್ ಆಗಿಲ್ಲ. ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಅಭಿವೃದ್ಧಿ ಆಗಿಲ್ಲ ಎನ್ನುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣೆ ನಡೆಯುವುದು ಸೂಕ್ತ ಎಂದರು.
ನಾವು ನಾಲ್ಕೈದು ತಿಂಗಳಿನಿಂದ ಅಕ್ಟೋಬರ್ ಕ್ರಾಂತಿ ಬಗ್ಗೆ ಹೇಳುತ್ತಿದ್ದೆವು. ಈಗ ಮಂತ್ರಿಯೇ ಕ್ಯಾಬಿನೆಟ್ ಪುನರ್ ರಚನೆ ಎಂದು ಹೇಳಿದ್ದಾರೆ. ಪುನರ್ ರಚನೆ ಅಂದರೆ ಮುಖ್ಯಮಂತ್ರಿಯೂ ಸೇರಿ ಬದಲಾಗ್ತಾರೆ. ಅಕ್ಟೋಬರ್ ಕ್ರಾಂತಿ ಎಂದ ಕಾಂಗ್ರೆಸ್ ನಾಯಕರು ಮನೆಗೆ ಹೋಗಿದ್ದಾರೆ. ಈಗ ಹೇಳುತ್ತಿರುವವರೂ ಮನೆಗೆ ಹೋಗುತ್ತಾರೆ. ಅಕ್ಟೋಬರ್ ಕ್ರಾಂತಿ ಬಳಿಕ ಕಾಂಗ್ರೆಸ್ ನಲ್ಲಿ ವಾಂತಿಯೂ ಆಗುತ್ತದೆ ಅಂತ ಅಶೋಕ್ ಎಂದು ನುಡಿದರು.