ಬೆಂಗಳೂರು:– ರಾಧಿಕಾ ಕುಮಾರಸ್ವಾಮಿ ಅವರು ನಾನು ಮನೆ ಖರೀದಿಸುವಾಗ 2 ಕೋಟಿ ಸಾಲ ಕೊಟ್ಟಿದ್ದರು ಎಂದು ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಾಲ ಕೊಟ್ಟಿರುವುದನ್ನು ನಾನು ಆದಾಯ ತೆರಿಗೆಯಲ್ಲಿ ತೋರಿಸಿದ್ದೇನೆ. ರಾಧಿಕಾ ಕುಮಾರಸ್ವಾಮಿ ಅವರು ಅವರ ಆದಾಯ ತೆರಿಗೆ ಫೈಲ್ ಮಾಡುವಾಗ ತೋರಿಸಿದ್ದಾರೆ. ಇಡಿ ದಾಳಿ ನಂತರ ಈಗ ಲೋಕಾಯುಕ್ತದಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಾಗಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.
ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಸಾಲ ನೀಡಿದ ವ್ಯಕ್ತಿಗಳ ಪಟ್ಟಿ ಸಿಕ್ಕಿತ್ತು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ಇದ್ದ ಕಾರಣ ಪೊಲೀಸರು ವಿಚಾರಣೆ ನಡೆಸಿದ್ದರು. ಇದೀಗ ಜಮೀರ್ ಅವರು ಕೂಡ ರಾಧಿಕಾ ಕುಮಾರಸ್ವಾಮಿ ಅವರ ಬಳಿ ಮನೆ ಖರೀದಿಸುವ ವೇಳೆ 2 ಕೋಟಿ ಸಾಲ ಪಡೆದಿದ್ದೆ ಎಂದಿದ್ದಾರೆ.