ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಭದ್ರಾವತಿಯ ಆರ್ಎಎಫ್ ಬೆಟಾಲಿಯನ್-97 ತಂಡವು ಬುಧವಾರ ಶಿರಹಟ್ಟಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಾನೂನು-ಸುವ್ಯವಸ್ಥೆ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವುದಕ್ಕಾಗಿ ಪಥ ಸಂಚಲನ ನಡೆಸಿತು.
ಈ ಸಂದರ್ಭದಲ್ಲಿ ತಹಸೀಲ್ದಾರ ಕೆ. ರಾಘವೇಂದ್ರ ರಾವು, ಸಿಪಿಐ ಬಿ.ವಿ. ನ್ಯಾಮಗೌಡ, ಆರ್ಎಎಫ್ ಅಸಿಸ್ಟಂಟ್ ಕಮಾಂಡೆಂಟ್ ಅನಿಲಕುಮಾರ ಜಾಧವ, ರವೀಂದ್ರ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.



