ರಾಹುಲ್ ದ್ರಾವಿಡ್​ ಕಾಲಿಗೆ ಪೆಟ್ಟು: ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್!

0
Spread the love

IPL 2025ರ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಹೀಗಿರುವಾಗಲೇ ರಾಜಸ್ಥಾನ ತಂಡದ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಗಾಯಗೊಂಡಿದ್ದಾರೆ. ಕಾಲಿಗೆ ಪ್ಲಾಸ್ಟರ್ ಹಾಕಿರುವ ಫೋಟೋ ವೈರಲ್ ಆಗಿದೆ.

Advertisement

ಕ್ರಿಕೆಟ್ ಆಡುವಾಗ ದ್ರಾವಿಡ್ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಹುಲ್ ದ್ರಾವಿಡ್ ಅವರು ಕಾಲಿಗೆ ಪ್ಲಾಸ್ಟರ್ ಹಾಕಿಕೊಂಡು ಕುರ್ಚಿಯ ಮೇಲೆ ಕುಳಿತಿರುವ ಫೋಟೋವನ್ನು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ, ರಾಹುಲ್​​ ಹೇಗೆ ಈ ಗಾಯ ಮಾಡಿಕೊಂಡರು ಎಂಬ ಮಾಹಿತಿಯನ್ನು ನೀಡಿದೆ. ಫ್ರಾಂಚೈಸಿ ನೀಡಿರುವ ಹೇಳಿಕೆಯ ಪ್ರಕಾರ, ಕನ್ನಡಿಗ ರಾಹುಲ್ ದ್ರಾವಿಡ್ ಬೆಂಗಳೂರಿನಲ್ಲಿ ಕ್ರಿಕೆಟ್ ಆಡುವಾಗ ಗಾಯಗೊಂಡಿದ್ದು, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಶೀಘ್ರದಲ್ಲೇ ಜೈಪುರದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಬರೆದುಕೊಂಡಿದೆ.


Spread the love

LEAVE A REPLY

Please enter your comment!
Please enter your name here