ಬೆಂಗಳೂರು: ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು 5ನೇ ತಾರೀಖು ಪ್ರತಿಭಟನೆ ಮಾಡಲು ರಾಜ್ಯಕ್ಕೆ ಬರುತ್ತಿದ್ದಾರೆ.
Advertisement
ಇಂದು ಪ್ರತಿಭಟನೆ ರೂಪುರೇಷೆ ಸಂಬಂಧ ಸಭೆ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು. ಎಲ್ಲಿ ಮಾಡಬೇಕು ಎಂದು ಆ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.
ಇನ್ನೂ ಕರ್ನಾಟಕದಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಎಲ್ಲ ದಾಖಲೆ ಪಡೆದುಕೊಂಡಿದ್ದಾರೆ. ಮಹದೇವಪುರ, ರಾಜಾಜಿನಗರ ಕ್ಷೇತ್ರಗಳಲ್ಲೂ ಮತಗಳ್ಳತನ ಆಗಿದೆ. ಈ ಬಗ್ಗೆ ಪ್ರತಿಭಟನೆ ಬಳಿಕ ಚುನಾವಣಾ ಅಧಿಕಾರಿಗಳಿಗೆ ದೂರು ಕೊಡುತ್ತೇವೆ ಎಂದರು.