ಬೆಳಗಾವಿ: ಶತಮಾನ ಹಿಂದೆ ಮಹಾತ್ಮ ಗಾಂಧಿ ಅವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಕಾಂಗ್ರೆಸ್ ಅಧಿವೇಶನವನ್ನು ಸ್ಮರಣಿಯಗೊಳಿಸಲು ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನ ನಡೆಯಲಿದೆ.
ಅದರಂತೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಸದ ರಾಹುಲ್ ಗಾಂಧಿ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಆಗಮಿಸಿದ್ದು, ಅವರನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸ್ವಾಗತಿಸಿದ್ದಾರೆ.ಸಾಂಬ್ರಾ ವಿಮಾನ ನಿಲ್ದಾಣಕ್ಕೆ ದೇಶದ ವಿವಿಧ ಭಾಗಗಳಿಂದ ಬರುತ್ತಿರುವ ಗಣ್ಯರಿಗೆ ಸ್ಥಳೀಯ ಕಾಂಗ್ರೆಸ್ ಮಹಿಳಾಮಣಿಗಳು ಆರತಿ ಬೆಳಗಿ ಹಣೆಗೆ ಕುಂಕುಮ ಹಚ್ಚಿ ಸ್ವಾಗತಿಸಿದರು.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ 120ಕ್ಕೂ ಅಧಿಕ ಗಣ್ಯರಿಗೆ ಆದರದ ಸ್ವಾಗತ ಕೋರಲಾಗಿದೆ. ಸಮಾವೇಶದಲ್ಲಿ ಭಾಗಿಯಾಗಲು ಕನ್ಹಯ್ಯಾ ಕುಮಾರ್ ಆಗಮಿಸಿದ್ದಾರೆ. ಅವರನ್ನು ದಾವಣಗೆರೆ ಬಂಜಾರಾ ತಂಡದಿಂದ ಬಂಜಾರಾ ನೃತ್ಯದ ಮೂಲಕ ಸ್ವಾಗತ ಮಾಡಲಾಯಿತು.