ನನ್ನ ಹೆಸರು ಜಪಿಸದಿದ್ದರೆ ರಾಹುಲ್, ತೇಜಸ್ವಿ ಯಾದವ್ʼಗೆ ಊಟ ಜೀರ್ಣವಾಗುವುದಿಲ್ಲ: ಪ್ರಧಾನಿ ಮೋದಿ ವಾಗ್ದಾಳಿ

0
Spread the love

ಬಿಹಾರ: ನನ್ನ ಹೆಸರು ಜಪಿಸದಿದ್ದರೆ ರಾಹುಲ್, ತೇಜಸ್ವಿ ಯಾದವ್ʼಗೆ ಊಟ ಜೀರ್ಣವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಮುಜಫರ್‌ಪುರದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಬಿಹಾರದ ಚುನಾವಣಾ ಯುದ್ಧದಲ್ಲಿ ತಮ್ಮನ್ನು ತಾವು ಯುವರಾಜ್ ಎಂದು ಪರಿಗಣಿಸುವ ಯುವರಾಜರ ಜೋಡಿ ಸುಳ್ಳು ಭರವಸೆಗಳ ಅಂಗಡಿಗಳನ್ನು ತೆರೆದಿದ್ದಾರೆ.

Advertisement

ಒಬ್ಬರು ಭಾರತದ ಅತ್ಯಂತ ಭ್ರಷ್ಟ ಕುಟುಂಬದ ಯುವರಾಜನಾದರೆ ಇನ್ನೊಬ್ಬರು ಬಿಹಾರದ ಅತ್ಯಂತ ಭ್ರಷ್ಟ ಕುಟುಂಬದ ಯುವರಾಜ. ಅವರಿಬ್ಬರೂ ಸಾವಿರಾರು ಕೋಟಿ ರೂಪಾಯಿಗಳ ಹಗರಣಗಳಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಇಬ್ಬರೂ ನಿರಂತರವಾಗಿ ನನ್ನ ವಿರುದ್ಧ ನಿಂದನೆಗಳನ್ನು ಮಾಡುತ್ತಿದ್ದಾರೆ. ಆದರೆ ಇಂಥವರಿಂದ ನಾವು ಇನ್ನೇನು ನಿರೀಕ್ಷಿಸಬಹುದು? ನನ್ನ ಹೆಸರು ಜಪಿಸದಿದ್ದರೆ ಅವರಿಗೆ ಊಟ ಜೀರ್ಣವಾಗುವುದಿಲ್ಲ” ಎಂದು ಮೋದಿ ಲೇವಡಿ ಮಾಡಿದ್ದಾರೆ.

ವಿರೋಧ ಪಕ್ಷಗಳ ಮೈತ್ರಿಕೂಟವು ಹೀನಾಯಕರವಾದ ಸೋಲಿನತ್ತ ಸಾಗುತ್ತಿದೆ ಎಂದು ಸಮೀಕ್ಷೆಗಳು ತೋರಿಸಿವೆ. ಇದರಿಂದ ಹತಾಶರಾಗಿರುವ ಕಾಂಗ್ರೆಸ್ ಮತ್ತು ಆರ್​ಜೆಡಿ ನಾಯಕರು ತಮ್ಮ ಪ್ರಣಾಳಿಕೆಯ ಮೂಲಕ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ, ವಿನಾಕಾರಣ ಬಿಜೆಪಿ ಹಾಗೂ ಎನ್​ಡಿಎ ಮೈತ್ರಿಕೂಟದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here