ರಾಯಚೂರು:- ರಾಯಚೂರು ಹೊರವಲಯದ ಮನ್ಸಲಾಪೂರ ಕ್ರಾಸ್ ಬಳಿ ಕಾರು ಪಲ್ಟಿಯಾಗಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ಜರುಗಿದೆ.
Advertisement
ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಜೀರಾ(65) ಮೃತ ಮಹಿಳೆ. ಇಶಾನ್ ಅಬ್ದುಲ್, ಇಲಾನ್ ಇಸ್ಮಾಯಿಲ್, ಮೊಹಮ್ಮದ್ ಇಜಾನ್ ಹಾಗೂ ಮೊಹಮ್ಮದ್ ಇಮ್ರಾನ್ ಗಾಯಗೊಂಡವರು.
ಕುಟಂಬ ಉಡುಪಿಯಿಂದ ಕಾರಿನಲ್ಲಿ ಹೈದರಾಬಾದ್ಗೆ ತೆರಳುತ್ತಿತ್ತು. ಅತೀ ವೇಗ ಹಿನ್ನೆಲೆಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಗಾಯಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.