ರಾಯಚೂರು:- ನಿನ್ನೆ ತಡರಾತ್ರಿ ಮಣ್ಣು ಕುಸಿದ ಪರಿಣಾಮ ಕಾರ್ಮಿಕ ಮೃತಪಟ್ಟ ಘಟನೆ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಚಿನ್ನದ ಗಣಿಯಲ್ಲಿ ಜರುಗಿದೆ.
Advertisement
ಏಕಾಏಕಿ ಮಣ್ಣು ಕುಸಿದು 48 ವರ್ಷದ ಕಾರ್ಮಿಕ ಮೌನೇಶ್ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಮೂವರು ಕಾರ್ಮಿಕರು ಗಾಯಗೊಂಡಿದ್ದು, ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರ್ಮಿಕರು ಚಿನ್ನದ ಗಣಿಯ ಲಾಸ್ಟ್ ಲೆವೆಲ್ನಲ್ಲಿ ಕೆಲಸ ಮಾಡುತ್ತಿದ್ದರು.
ಹಟ್ಟಿ ಚಿನ್ನದ ಗಣಿಯ ಅಂಡರ್ಗ್ರೌಂಡ್ನಲ್ಲಿ ಮಣ್ಣು ಕುಸಿದು ದುರಂತ ಸಂಭವಿಸಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.