ರಾಯಚೂರು: ಕರ್ನಾಟಕದಾದ್ಯಂತ ಬಾಣಂತಿಯರ ಮರಣ ಮೃದಂಗ ಮುಂದುವರೆದಿದೆ. ಹೊಸ ವರ್ಷದ ಮೊದಲ ದಿನವೇ ಬಾಣಂತಿ ಮತ್ತು ನವಜಾತ ಶಿಶು ಸಾವನ್ನಪ್ಪಿರುವ ಘಟನೆ ರಾಯಚೂರು ನಗರದ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
Advertisement
ಶಿವಲಿಂಗಮ್ಮ(21) ಮೃತಪಟ್ಟ ಬಾಣಂತಿಯಾಗಿದ್ದು, ಡಿಸೆಂಬರ್ 25ರಂದು ಶಿವಲಿಂಗಮ್ಮಗೆ ಹೆರಿಗೆ ಆಗಿತ್ತು. ಐದು ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಲಿಂಗಮ್ಮ, ಇಂದು ಬೆಳಿಗ್ಗೆ 5 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಬಾಣಂತಿ ಮತ್ತು ಮಗು ಸಾವನ್ನಪ್ಪಿದೆ ಎನ್ನಲಾಗಿದೆ.
ಇನ್ನು ಮಗುವಿಗೆ ಸೋಂಕು ತಗುಲಿ ಸಾವನ್ನಪ್ಪಿದೆ ಅಂತ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಇತ್ತ ಕುಟುಂಬಸ್ಥರು ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ, ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೆಂದು ಆರೋಪ ಮಾಡಿದ್ದಾರೆ.