ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರದಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ಹಾವೇರಿ, ಗದಗ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ.
ಧಾರವಾಡದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.








