ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ತೆಲಂಗಾಣ, ತಮಿಳುನಾಡು, ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಚಿಕ್ಕಮಗಳೂರು, ಕೊಡಗು, ಕೋಲಾರ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ಬಂಗಾಳಕೊಲ್ಲಿಯಲ್ಲಿ ಎದುರಾಗಿರುವ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಒಂದು ವಾರಗಳ ಕಾಲ ಹಲವೆಡೆ ಭಾರೀ ಮಳೆ ಆಗಲಿದೆ ಎಂದು ಐಎಂಡಿ ರಿಪೋರ್ಟ್ ತಿಳಿಸಿದೆ.