ಬೆಂಗಳೂರು:– ನಗರದಲ್ಲಿ ಸುರಿದ ಭಾರೀ ಮಳೆಯಿಂದ ಮಣ್ಣು ಕುಸಿದು ಓರ್ವ ಕಟ್ಟಡ ಕಾರ್ಮಿಕ ಬಲಿಯಾಗಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Advertisement
ಕಟ್ಟಡ ನಿರ್ಮಾಣಕ್ಕಾಗಿ ಅಗೆಯುವಾಗ ಮಣ್ಣು ಕುಸಿದು ಎಂಬಾಸಿ ಗ್ರೂಪ್‌ಗೆ ಸೇರಿದ ಕಾರ್ಮಿಕ ಸಾವನ್ನಪ್ಪಿದ್ದಾನೆ. ಮಳೆ ನೀರು ಜಾಸ್ತಿ ಹರಿದ ಪರಿಣಾಮ ಮಣ್ಣು ಕುಸಿದಿದೆ, ಈ ವೇಳೆ ಮಣ್ಣಿನಡಿ ಸಿಲುಕಿ ಆಂಧ್ರ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ. ಇನ್ನೂ ಮತ್ತೋರ್ವನ ಸ್ಥಿತಿಯೂ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಳೆದ 2-3 ದಿನಗಳಿಂದ ಆಗೊಮ್ಮೆ ಈಗೊಮ್ಮೆ ಮಳೆ ಬಂದು ಹೋಗುತ್ತಿತ್ತು. ಆದ್ರೆ ಸೆಪ್ಟೆಂಬರ್ ಮೊದಲ ದಿನವೇ ಜೋರು ಮಳೆ ಸುರಿದಿದೆ. ಈ ವೇಳೆ ಭಾರೀ ಅವಾಂತರ ಜರುಗಿದೆ.