ಹಾಸನ:- ಜಿಲ್ಲೆಯ ಸಕಲೇಶಪುರದ ಬಾಗೆ ಎಂಬಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಕಾಣದೇ ಕಾರು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಅಭಿಷೇಕ್ ಹಾಗೂ ಶರತ್ ಮೃತರು. ಇವರು ಬೆಂಗಳೂರು ಮೂಲದವರು ಎನ್ನಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ. ನಾಲ್ವರು ಎರ್ಟಿಗಾ ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಬಾಗೆ ಸಮೀಪದಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಕಾಣದೇ ಚಾಲಕನ ನಿಯಂತ್ರಣ ತಪ್ಪಿದ್ದು, ಪರಿಣಾಮ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.