ದಾವಣಗೆರೆ:- ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಸತತ ಮಳೆಗೆ ಗೋಡೆ ಕುಸಿದು ವೃದ್ಧ ಸಾವನ್ನಪ್ಪಿರುವ ಘಟನೆ ಜರುಗಿದೆ.
81 ವರ್ಷದ ಕುಳಗಟ್ಟೆ ಬಸವರಾಜಪ್ಪ ಎಂದು ಗುರುತಿಸಲಾಗಿದೆ. ಪುಷ್ಕರಣಿ ಬೀದಿಯಲ್ಲಿದ್ದ ಮನೆಯಲ್ಲಿ ಗೋಡೆ ಕುಸಿದು ಸಾವನ್ನಪ್ಪಿದ್ದಾರೆ.
ರಾತ್ರಿ ಸತತ ಮಳೆ ಸುರಿಯುತ್ತಿದ್ದು, ಗೋಡೆ ಒಂದು ಕಡೆ ವಾಲುತ್ತಿತ್ತು. ಈ ವೇಳೆ ಮನೆಯಲ್ಲಿದ್ದ ಬಸವರಾಜಪ್ಪ, ಆತನ ಮಗ ಹಾಗೂ ಸೊಸೆ ಮನೆಯಿಂದ ಹೊರಬರಲು ಯತ್ನಿಸಿದ್ದಾರೆ. ಆತನ ಮಗ ಹಾಗೂ ಸೊಸೆ ಮನೆಯಿಂದ ಹೊರಗೆ ಬಂದಿದ್ದಾರೆ. ಆದರೆ ಮನೆಯಿಂದ ಹೊರಬರುವ ಪ್ರಯತ್ನದಲ್ಲಿದ್ದ ವೃದ್ಧ ಬಸವರಾಜಪ್ಪನ ಮೇಲೆ ಗೋಡೆ ಕುಸಿದಿದೆ. ಗೋಡೆ ಕುಸಿದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚನ್ನಗಿರಿ ತಹಶೀಲ್ದಾರರಾದ ರುಕ್ಮಿಣಿಬಾಯಿ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ಐದು ಲಕ್ಷ ರೂ. ಚೆಕ್‌ನ್ನು ಪರಿಹಾರವಾಗಿ ನೀಡಿದ್ದಾರೆ.



