ವಿಜಯಪುರ:- ನಗರದಲ್ಲಿ ಸುರಿದ ಭಾರೀ ಗಾಳಿ-ಮಳೆಗೆ ಅವಾಂತರ ಸೃಷ್ಟಿ ಆಗಿದೆ. ಅದರಂತೆ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ರಾತ್ರಿಯಿಡಿ ಸುರಿದ ಭಾರೀ ಗಾಳಿ-ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಗೃಹಿಣಿ ಸಾವನ್ನಪ್ಪಿರುವ ಘಟನೆ ಜರುಗಿದೆ.
ಸಂಗೀತಾ(30) ಮೃತ ಮಹಿಳೆ. ಭಾನುವಾರ ತಡರಾತ್ರಿ ಮನೆಯಲ್ಲಿ ಮಲಗಿದ್ದಾಗ ಅವಘಡ ಸಂಭವಿಸಿದೆ. ಮಳೆಯಿಂದಾಗಿ ಮನೆ ಸೋರುತ್ತಿದ್ದ ವೇಳೆ ಮನೆಯಿಂದ ಎದ್ದು ಹೊರ ಬಂದು ಪತಿ ಹಾಗೂ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಆದರೆ ಗೃಹಿಣಿ ಸಂಗೀತಾ ಮೇಲೆ ಮೇಲ್ಛಾವಣಿ ಬಿದ್ದ ಕಾರಣ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ತದನಂತರ ಸ್ಥಳೀಯರು ಮಣ್ಣಲ್ಲಿ ಮುಚ್ಚಿಹೋಗಿದ್ದ ಸಂಗೀತಾ ಮೃತದೇಹವನ್ನು ಹೊರತೆಗೆದಿದ್ದಾರೆ.
ತಿಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



