ಬೀದರ್:– ಬೀದರ್‌ನಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ವರುಣನ ನರ್ತನಕ್ಕೆ ಜನತೆ ಹೈರಾಣಾಗಿ ಹೋಗಿದ್ದಾರೆ. ಅಲ್ಲದೇ ಭಾರೀ ಮಳೆಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಹುಲಸೂರು ಇಂದ ಭಾಲ್ಕಿ ರಸ್ತೆ ಸಂಚಾರ ಬಂದಾಗಿ ವಾಹನ ಸವಾರರು ಪರದಾಡುತ್ತಿದ್ದು ಬೀದರ್ ತಾಲೂಕಿನ ಚಿಲ್ಲರ್ಗಿ ಸೇತುವೆ ಮೇಲೆ ನೀರು ಹರಿದು ರಸ್ತೆ ಸಂಚಾರ ಬಂದಾಗಿದೆ. ಸೇತುವೆ ಮೇಲೆ ನೀರು ಹರಿದು ಪರಿಣಾಮ ರಸ್ತೆ ಸಂಚಾರ ಬಂದಾಗಿದ್ದು, ಚಿಲ್ಲರ್ಗಿ ಟು ಚಿಮ್ಮಕೋಡ್, ಗಾದಗಿ ರಸ್ತೆ ಸಂಚಾರ ಬಂದಾಗಿದೆ. ರಸ್ತೆ ಸಂಚಾರ ಬಂದಾಗಿ ವಾಹನ ಸವಾರರು ಪರದಾಡುತ್ತಿದ್ದರೆ, ಕೆಲವರು ನೀರು ತುಂಬಿದ ರಸ್ತೆ ಮೇಲೆಯ ನಡೆದುಕೊಂಡು ಸೇತುವೆ ದಾಟುತ್ತಿದ್ದಾರೆ
ಇನ್ನೂ ಕಮಲನಗರದ ಗ್ರಾಮವೊಂದರಲ್ಲಿ ರಸ್ತೆ ಮೇಲೆ ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ದಾಟಲು ಎಮ್ಮೆಗಳು ಪರದಾಡಿವೆ. ಮಾಂಜ್ರಾನದಿಗೆ ಲಕ್ಷ ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಮಾಂಜ್ರಾನದಿ ದಡದಲ್ಲಿರುವ ಲಕ್ಷಾಂತರ ಎಕರೆ ಜಮೀನುಗಳಲ್ಲಿ ಬೆಳೆದಿದ್ದ ಬೆಳಗಳು ಸಂಪೂರ್ಣವಾಗಿ ಜಲಾವೃತವಾಗಿವೆ.



