HomeKarnataka Newsಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ: ನದಿಗೆ ಬಿದ್ದ 2 ಕಾರುಗಳು!

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ: ನದಿಗೆ ಬಿದ್ದ 2 ಕಾರುಗಳು!

For Dai;y Updates Join Our whatsapp Group

Spread the love

ಚಿಕ್ಕಮಗಳೂರು:- ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರ ಜಫರಾಗಿದ್ದು, ಭಾರೀ ಅವಾಂತರಗಳೇ ಸೃಷ್ಟಿಸಿದೆ. ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಚಾಲಕನ ‌ನಿಯಂತ್ರಣ ತಪ್ಪಿ ಎರಡು ಕಾರುಗಳು ಹೇಮಾವತಿ ನದಿಗೆ ಉರುಳಿಬಿದ್ದಿವೆ.

1 ಗಂಟೆಯ ಅಂತರದಲ್ಲಿ ಎರಡು ಕಾರುಗಳು ಪಲ್ಟಿಯಾಗಿವೆ. ಚಕಮಕ್ಕಿ ಗ್ರಾಮದ ಬಳಿ‌ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಸ್ಥಳೀಯರು, ಹಗ್ಗದಿಂದ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ.

ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಮುಂಗಾರು ಆರಂಭದಲ್ಲೇ ಹೀಗಾದರೆ, ಮಳೆಯ ತೀವ್ರತೆ ಹೆಚ್ಚಾದರೆ ಪರಿಸ್ಥಿತಿ ಹೇಗೆ ಎಂಬ ಆತಂಕ ಎದುರಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!