ಗದಗ:- ಇಂದು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮರವೊಂದು ಬೇರು ಸಮೇತ ವಿದ್ಯುತ್ ತಂತಿಯ ಮೇಲೆ ಉರುಳಿ ಬಿದ್ದಿರುವ ಘಟನೆ ಬೆಟಗೇರಿಯ ಶಿವಾಜಿ ನಗರದಲ್ಲಿ ಜರುಗಿದೆ.
Advertisement
ಘಟನೆ ನಡೆದು ಗಂಟೆಗಳೇ ಕಳೆದರೂ ಗದಗ-ಬೆಟಗೇರಿ ನಗರಸಭೆ ಅಧಿಕಾರಿಗಳು, ಹೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಬಾರದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಮರ ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತೊಂಡಿದೆ.
ಇನ್ನೂ ಗದಗ ಜಿಲ್ಲೆಯ ಹಲವಡೆ ಇಂದು ಗಾಳಿ ಸಮೇತ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ಜನತೆ ಹಾಗೂ ವಾಹನ ಸವಾರರು ಪರದಾಡಿದ್ದಾರೆ. ಮತ್ತೊಂದೆಡೆ ಬೇಸಿಗೆ ಬಿಸಿಲ ಬೇಗೆಗೆ ಮಳೆರಾಯ ತಂಪೆರೆದಿದ್ದು, ಜನತೆ ಖುಷ್ ಆಗಿದ್ದಾರೆ.