ಮಳೆ ಅವಾಂತರ: ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು.. ಧಾನ್ಯಗಳೆಲ್ಲಾ ನೀರುಪಾಲು!

0
Spread the love

ವಿಜಯಪುರ:- ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿ ಆಗಿರುವ ಘಟನೆ ಬಸವನ ಬಾಗೇವಾಡಿಯಲ್ಲಿ ಜರುಗಿದೆ. ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಭಾರೀ ಮಳೆ ಸುರಿದಿದ್ದು, ನಿನ್ನೆ ಸಾಯಂಕಾಲ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ಪಟ್ಟಣದ‌ ಲಕ್ಷ್ಮೀ ನಗರ, ರಾಯಣ್ಣ ವೃತ್ತದ ಬಳಿಯ 20 ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ಕಾಳು-ಧಾನ್ಯಗಳು ನೀರು ಪಾಲಾಗಿವೆ.

Advertisement

ಪಟ್ಟಣದ ಲಕ್ಷ್ಮೀ ನಗರ, ರಾಯಣ್ಣ ವೃತ್ತದ ಬಳಿಯ 20ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಆವಾಂತರ ಸೃಷ್ಟಿಸಿದೆ. ಮಳೆಯಿಂದಾಗಿ ಮನೆಯಲ್ಲಿದ್ದ ಧಾನ್ಯಗಳು ನೀರುಪಾಲಾಗಿವೆ. ಮನೆಗೆ ನೀರು ನುಗ್ಗಿ ಮನೆಯಲ್ಲಿದ್ದ ಸಾಮಾಗ್ರಿಗಳು ನೀರು ಪಾಲಾಗಿದ್ದು, ಮಹಿಳೆ ಕಣ್ಣೀರು ಹಾಕಿದ್ದಾಳೆ. ಇತ್ತ ಕೆರೆ ಪಕ್ಕದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ವೃದ್ಧೆ ಪರದಾಡಿದ್ದಾಳೆ. ಮನೆಗೆ ನೀರು ನುಗ್ಗಿದ್ದಕ್ಕೆ ಮಹಿಳೆಯೊಬ್ಬಳು ಕಣ್ಣೀರು ಹಾಕಿದ ಘಟನೆಯೂ ನಡೆದಿದೆ.‌ ಮನೆಯಲ್ಲಿನ ಸಾಮಗ್ರಿಗಳು ನೀರು ಪಾಲಾದ ಹಿನ್ನೆಲೆ ಮಹಿಳೆ ಕಣ್ಣೀರು ಹಾಕಿದ್ದಾರೆ.


Spread the love

LEAVE A REPLY

Please enter your comment!
Please enter your name here