ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆಗಳು ಜಲಾವೃತ, ಹಲವೆಡೆ ನಿಧಾನಗತಿಯ ಸಂಚಾರ!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ಟೋಬರ್ 3ರ ಶುಕ್ರವಾರ ಧಾರಾಕಾರ ಮಳೆಯಾಗಿದ್ದು, ರಸ್ತೆಗಳೆಲ್ಲವೂ ಮಳೆ ನೀರಿನಿಂದ ತುಂಬಿಹೋಗಿವೆ.

Advertisement

ವೀರಸಂದ್ರ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ಸಾಗರ್ ಜಂಕ್ಷನ್, ಡೈರಿ ಸಿಗ್ನಲ್ ರಾಯಸಂದ್ರ ಇನ್ನಿತರೆ ರಸ್ತೆಗಳು ಜಲಾವೃತವಾಗಿದೆ. ಇದರಿಂದಾಗಿ ವಾಹನ ಸಂಚಾಲಕರು ತೀವ್ರ ಕಷ್ಟಕ್ಕೊಳಗಾಗಿದ್ದಾರೆ. ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆಯಿಲ್ಲದ ಕಾರಣ ರಸ್ತೆಯಲ್ಲಿ ನೀರು ನಿಂತಿದೆ. ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ.

ಬೆಂಗಳೂರು ಸಂಚಾರ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ ಮೈಸೂರು ರಸ್ತೆ, ಗುಡ್ಡದಹಳ್ಳಿ ಜಂಕ್ಷನ್, ಕೆಂಗೇರಿ, ಬಿಳೇಕಲ್ಲಳ್ಳಿ ಸಿಗ್ನಲ್, ಜಿ.ಡಿ. ಮರ ಸಿಗ್ನಲ್, ಸಾಗರ್ ಜಂಕ್ಷನ್, ಡೈರಿ ಸಿಗ್ನಲ್, ದೊಡ್ಡ ಮರ, ಚೊಕ್ಕಸಂದ್ರ, ರಾಯಸಂದ್ರದಲ್ಲಿ ಅಲ್ಲಲ್ಲಿ ಮಳೆ ನೀರು ನಿಂತಿದೆ. ರಸ್ತೆಗಳು ಜಲಾವೃತವಾಗಿರುವ ಕಾರಣ ಈ ಎಲ್ಲಾ ಪ್ರದೇಶಗಳಲ್ಲಿ ನಿಧಾನ ಗತಿಯ ಸಂಚಾರವಿರುತ್ತದೆ. ಈ ಹಿನ್ನೆಲೆ ಸಂಚಾರ ದಟ್ಟಣೆಯೂ ಇರುತ್ತದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಮೈಸೂರು ರಸ್ತೆಯ, ಗುಡ್ಡದಹಳ್ಳಿ ಜಂಕ್ಷನ್, ಕೆಂಗೇರಿ ಕಡೆಗೆ,ಬಿಳೇಕಲ್ಲಳ್ಳಿ ಸಿಗ್ನಲ್ ಗೆ ಜಿ.ಡಿ.ಮರ ಸಿಗ್ನಲ್ ಕಡೆಗೆ ಮಳೆ ನೀರು ರಸ್ತೆಯಲ್ಲಿ ನಿಂತಿರುವುದರಿಂದ ನಿಧಾನಗತಿಯ ಸಂಚಾರವಿರಲಿದೆ‌. ಈ ಬಗ್ಗೆ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here