ಬೆಂಗಳೂರು:- ಕರ್ನಾಟಕದಲ್ಲಿ ನಾಳೆಯಿಂದ 3 ದಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇಷ್ಟೇ ಅಲ್ಲ, ಕೋಲಾರ, ಬೆಂಗಳೂರು, ಮೈಸೂರು, ತುಮಕೂರು, ಶಿವಮೊಗ್ಗ, ಧಾರವಾಡ, ದಾವಣಗೆರೆ, ರಾಮನಗರ, ಹಾಸನ, ಮಡಿಕೇರಿ, ಕೊಡಗು, ಮಂಡ್ಯ, ಚಾಮರಾಜನಗರದಲ್ಲೂ ಮಳೆ ಆಗಲಿದೆ.
ಮೋಡ ಕವಿದ ವಾತಾವರಣದ ಕಾರಣ ಚಳಿ ಪ್ರಮಾಣ ಕಡಿಮೆಯಾಗಲಿದೆ. ನಾಳೆ ಬೆಂಗಳೂರಲ್ಲಿ ಹಲವು ಕಡೆ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಲಿದೆ. ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಮಂಗಳೂರು, ಉಡುಪಿಯಲ್ಲಿ ವರುಣನ ಆರ್ಭಟ ಜೋರಾಗಿ ಇರಲಿದೆ.
ನಾಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಕೂಡ ಮಳೆ ಮುನ್ಸೂಚನೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಮೇತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



