ಉತ್ತರ ಕನ್ನಡ: ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲಾ, ಕಾಲೇಜಿಗೆ ನಾಳೆ ರಜೆ ಘೋಷಿಸಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಮುಂಡಗೋಡ ಮತ್ತು ಹಳಿಯಾಳ ತಾಲೂಕು ಹೊರತುಪಡಿಸಿ ಕಾರವಾರ, ಕುಮಟಾ, ಅಂಕೋಲ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ, ಯಲ್ಲಾಪುರ ತಾಲೂಕಿನ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಒಟ್ಟು 5 ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಧಾರಾಕಾರ ಮಳೆಯ ಸೂಚನೆ ಹಿನ್ನಲೆ ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಿದೆ
ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಜೋರಾಗಿದ್ದು, ಸಕಲೇಶಪುರ, ಆಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಡಿಡಿಪಿಐ ಹೆಚ್.ಕೆ.ಪಾಂಡು ಸೂಚನೆಯಂತೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ