ಬೆಂಗಳೂರು:- ಕರ್ನಾಟಕದಲ್ಲಿ ಮಳೆ ಆರ್ಭಟ ಜೋರಾಗಿದ್ದು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುತ್ತಿದೆ.
ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಗದಗದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.