ಕೊಡಗು:-ಕೊಡಗು ಜಿಲ್ಲಾಡಳಿತವು ಭಾರೀ ಮಳೆ ಹಾಗೂ ಅವಾಂತರಗಳಿಂದ ಎಚ್ಚೆತ್ತುಕೊಂಡು ಮುಂದಿನ ಎರಡು ದಿನಗಳ ಕಾಲ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಕರ್ನಾಟಕದ ಹಲವೆಡೆ ಭಾರೀ ಮಳೆ ಆಗುತ್ತಿದ್ದು, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳು ಸೇರಿದಂತೆ ಕೆಲವೆಡೆ ಗುಡ್ಡ ಕುಸಿತ ಆಗಿ, ಅವಘಡಗಳು ಸಂಭವಿಸಿವೆ. ಈ ಹಿನ್ನಲೆ ಎಚ್ಚೆತ್ತ ಕೊಡಗು ಜಿಲ್ಲಾಡಳಿತ ಮುಂದಿನ ಎರಡು ದಿನಗಳ ಕಾಲ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿ, ಗುಡ್ಡ, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ.
ಇದರಿಂದ ಸಧ್ಯ ಕೊಡಗು ಜಿಲ್ಲೆಯ ಜನ ಆತಂಕದಲ್ಲಿದ್ದಾರೆ ಎನ್ನಲಾಗಿದೆ.



