ಬೆಂಗಳೂರು:- ದಕ್ಷಿಣ ಕನ್ನಡ, ಉಡುಪಿ ಸೇರಿ ಕರ್ನಾಟಕದ ಹಲವೆಡೆ ಸೆಪ್ಟೆಂಬರ್ 12ರವರೆಗೂ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.



