HomeMangaloreಕಂಕನಾಡಿಯಲ್ಲಿ ಮಳೆ ತಂದ ದುರಂತ: ಮನೆ ಮೇಲ್ಚಾವಣಿ ಕುಸಿದು ಮೂವರು ಬಲಿ

ಕಂಕನಾಡಿಯಲ್ಲಿ ಮಳೆ ತಂದ ದುರಂತ: ಮನೆ ಮೇಲ್ಚಾವಣಿ ಕುಸಿದು ಮೂವರು ಬಲಿ

For Dai;y Updates Join Our whatsapp Group

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಂಕನಾಡಿಯಲ್ಲಿ ನಿರಂತರ ಮಳೆ ಭೀಕರ ದುರಂತಕ್ಕೆ ಕಾರಣವಾಗಿದ್ದು, ಹಳೆಯ ಹಂಚಿನ ಮನೆಯ ಗೋಡೆ ಹಾಗೂ ಮೇಲ್ಚಾವಣಿ ಕುಸಿದು ಮಹಿಳೆ ಮತ್ತು ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಮೂವರನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಂಗಳವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದ ಕಟ್ಟಡದ ಗೋಡೆಗಳು ದುರ್ಬಲಗೊಂಡಿದ್ದರಿಂದ ಬುಧವಾರ ಮುಂಜಾನೆ ಮನೆ ಏಕಾಏಕಿ ಕುಸಿದು ಬಿದ್ದಿದೆ. ದುರಂತದ ವೇಳೆ ಮನೆಯೊಳಗೆ ಮಲಗಿದ್ದವರು ಅವಶೇಷಗಳಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆಯ ವೇಳೆ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಕುಸಿದ ಕಟ್ಟಡದಲ್ಲಿ ನಾಲ್ಕು ಕುಟುಂಬಗಳು ವಾಸವಾಗಿದ್ದವು. ಬಿಹಾರ ಮೂಲದ ಲಾಲ್ ಬಾಬು ಕುಟುಂಬದ 8 ವರ್ಷದ ಅನಾಮಿಕ ಚೌರಾಸಿಯಾ ಹಾಗೂ 4 ವರ್ಷದ ಪರಿ ಮೃತಪಟ್ಟಿದ್ದು, ಲಾಲ್ ಬಾಬು ಮತ್ತು ಪತ್ನಿ ಇಂದು ಬದುಕುಳಿದಿದ್ದಾರೆ. ಮತ್ತೊಂದು ಕುಟುಂಬದ ಸದಸ್ಯೆ 46 ವರ್ಷದ ಶಾಂತಾ ಕೂಡ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜಿಲ್ಲಾಡಳಿತ ಚಿಕಿತ್ಸೆ ವೆಚ್ಚವನ್ನು ಭರಿಸುವುದಾಗಿ ಘೋಷಿಸಿದೆ. ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ತಿಳಿಸಿದ್ದಾರೆ. ಮನೆ ಮಾಲೀಕರಿಗೆ ನಿಯಮಾನುಸಾರ ನೆರವು ನೀಡುವ ಪ್ರಕ್ರಿಯೆಯೂ ಆರಂಭವಾಗಲಿದೆ.

ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಸಚಿವ ಯು.ಟಿ. ಖಾದರ್ ದೆಹಲಿ ಪ್ರವಾಸ ಸ್ಥಗಿತಗೊಳಿಸಿ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ವೇಗಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img