ಬೆಂಗಳೂರು:- ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದಿನಿಂದ 2 ದಿನಗಳ ಕಾಲ ಮಳೆ ಆಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಗದಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



