ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಜೂನ್ 10ರ ಬಳಿಕ ಮಳೆ ಹೆಚ್ಚಾಗಲಿದ್ಯಂತೆ!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಜೂನ್ 10ರ ಬಳಿಕ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here