ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

0
Spread the love

ಬೆಂಗಳೂರು :- ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement

ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ಹಾಸನ, ಚಿಕ್ಕ ಮಗಳೂರು, ಮೈಸೂರು, ರಾಮನಗರ ಈ ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಮಳೆ ಆಗಲಿದೆ. ಒಂದೆರಡು ಕಡೆಗಳಲ್ಲಿ ಸಾಧಾರಣಕ್ಕಿಂತ ಅತ್ಯಧಿಕ ಪ್ರಮಾಣದ ಮಳೆ ಆಗಲಿದೆ ಎಂದು ತಿಳಿಸಿದೆ.

ಸದ್ಯ ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಉತ್ತರ ಒಳನಾಡಿನಲ್ಲಿ ಈ ವಾರಪೂರ್ತಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಹೀಗಿದ್ದರೂ ಈ ಭಾಗದಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದಿದೆ.

ರಾಜ್ಯದ ಬಹುತೇಕ ಕಡೆ ಗರಿಷ್ಠ ತಾಪಮಾನ ಮತ್ತು ಕನಿಷ್ಠ ತಾಪಮಾನ ಇಳಿಕೆ ಆಗಿದೆ. ಹೀಗಾಗಿ ಚಳಿಗಾಲ ಆರಂಭವಾದ ಅನುಭವವಾಗುತ್ತಿದೆ. ಈ ಮೂಲಕ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ ಆವರಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


Spread the love

LEAVE A REPLY

Please enter your comment!
Please enter your name here