ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 2 ರಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.