Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭರ್ಜರಿ ಮಳೆ; ಎಲ್ಲೆಲ್ಲಿ ಗೊತ್ತಾ?

0
Spread the love

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭರ್ಜರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಕಾರಣ ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ಜೊತೆಗೆ ಸಿಕ್ಕಾಪಟ್ಟೆ ಚಳಿಯೂ ಇರಲಿದೆ. . ಮಧ್ಯಾಹ್ನದ ಮೇಲೆ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಇದೆ.

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆ ಆಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮಡಿಕೇರಿ, ಮೈಸೂರಲ್ಲೂ ಮಳೆ ಬೀಳಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು, ಬೆಳಗಾವಿ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.


Spread the love

LEAVE A REPLY

Please enter your comment!
Please enter your name here