Home Karnataka News Rain News: ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ!

Rain News: ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ!

0
Rain News: ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ!
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here