ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Advertisement
ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಏ.17ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನೂ ಇಂದು ಬೆಂಗಳೂರಿನ ಹೆಬ್ಬಾಳ, ರಾಜಾಜಿನಗರ, ಮತ್ತಿಕೆರೆ, ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್, ಮಲ್ಲೇಶ್ವರಂ ಹಲವೆಡೆ ವರುಣ ಆರ್ಭಟಿಸುತ್ತಿದ್ದು, ಯಶವಂತಪುರ ಸೇರಿದಂತೆ ಕೆಲವು ಕಡೆ ತುಂತುರು ಮಳೆಯಾಗುತ್ತಿದೆ.