ಚಿಕ್ಕಮಗಳೂರು:- ಭಾರೀ ಮಳೆಯಿಂದ ಶಿಥಿಲಗೊಂಡಿದ್ದ 80 ವರ್ಷದ ಹಳೆಯ ಶಾಲಾ ಕಟ್ಟಡವೊಂದು ಕುಸಿದಿರುವ ಘಟನೆ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮದಲ್ಲಿ ಜರುಗಿದೆ.
ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದ ಕಾರಣ ಕಳೆದ ಕೆಲ ವರ್ಷಗಳಿಂದ ಹಿಂದೆಯೇ ಇದನ್ನು ಮುಚ್ಚಲಾಗಿತ್ತು. ಮಳೆಯ ಅಬ್ಬರಕ್ಕೆ ನಲುಗಿ ಏಕಾಏಕಿ ಕುಸಿದು ಬಿದ್ದಿದೆ. ಅಧಿಕಾರಿಗಳು ಕ್ರಮವಹಿಸಿ ಶಾಲೆಯನ್ನು ಬೇರೆಡೆ ವರ್ಗಾಯಿಸಿರುವುದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.
ಇನ್ನೂ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದೆ.



