ಬೆಂಗಳೂರು:- ಭಾರೀ ಮಳೆ ಹಿನ್ನೆಲೆ ಕರ್ನಾಟಕದ 6 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಮಂಡ್ಯ, ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.