ದಕ್ಷಿಣ ಕನ್ನಡ:- ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
Advertisement
ಮೇ.27 ಮತ್ತು 28 ರಂದು ಎರಡು ದಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಇನ್ನೂ ಮಲೆನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದೆ. ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಂಡಿದೆ.