ಬೆಂಗಳೂರು:- ಕರ್ನಾಟಕದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆ ಆದಂತಿದೆ.
ಇನ್ನೂ ಒಂದು ವಾರಗಳು ಮಳೆ ಆಗುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರಾವಳಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಹಳದಿ ಅಲರ್ಟ್ ನೀಡಲಾಗಿದೆ. ಮಲೆನಾಡಿನಲ್ಲೂ ಮಳೆ ಕಡಿಮೆಯಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆರಾಯ ಕೊಂಚ ಬಿಡುವು ಪಡೆದಿದ್ದಾನೆ. ಇತ್ತ ಬೆಂಗಳೂರಿನಲ್ಲಿ ಕೂಡ ವರುಣನ ಆರ್ಭಟ ಕಡಿಮೆಯಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇನ್ನೆರಡು ದಿನ ಹಳದಿ ಅಲರ್ಟ್ ನೀಡಲಾಗಿದೆ. ಆಗಸ್ಟ್ ಮೊದಲ ವಾರ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಅತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಸನ, ಕೊಡಗು, ವಿಜಯಪುರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ,ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.